Saturday, June 13, 2026
spot_imgspot_img
spot_imgspot_img

ಮಂಗಳೂರು: ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವಕ; ಪ್ರಕರಣ ದಾಖಲು..!

- Advertisement -
- Advertisement -

ಮಂಗಳೂರು: ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಯುವಕನೋರ್ವನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಗರೇಟ್ ಸೇದಿದ ಯವಕ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂದು ಗುರುತಿಸಲಾಗಿದೆ.

ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!