Saturday, April 27, 2024
spot_imgspot_img
spot_imgspot_img

ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಖಾನೆ ಸಂಪೂರ್ಣ ಭಸ್ಮ..!

- Advertisement -G L Acharya panikkar
- Advertisement -

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸೀಫುಡ್ ಫ್ಯಾಕ್ಟರಿಯಲ್ಲಿ ಗುರುವಾರ ಇಂದು ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ. ಅವಘಡದಿಂದ ಬೈಕಂಪಾಡಿಯಲ್ಲಿರುವ ಸೀ ಫುಡ್ ಫ್ಯಾಕ್ಟರಿ ಸಂಪೂರ್ಣ ಭಸ್ಮವಾಗಿದೆ.

ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ ಮೊಹಮ್ಮದ್ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವುದನ್ನ ತಪ್ಪಿಸಿದರು. ಬೆಂಕಿಯಿಂದ ಹಾನಿಗೊಳಗಾದ ಪ್ರಮಾಣವನ್ನು ಪ್ರಸ್ತುತ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!