Sunday, June 14, 2026
spot_imgspot_img
spot_imgspot_img

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

- Advertisement -
- Advertisement -

ಮಂಗಳೂರು: ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷ ಎಂದು ಗುರುತಿಸಲಾಗಿದೆ.

ಆರೋಪಿ ಸಂತೋಷನನ್ನು ಬಂಧಿಸಿ ಮಂಗಳೂರಿನ 5ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಳಿಕ ಜಾಮೀನಿನ ಮೇರೆಗೆ ಬಿಡುಗಡೆಗೊಳಿಸಲಾಗಿದೆ. ಆರೋಪಿ ಬೆಳ್ತಂಗಡಿಯ ಛಿಬಿದ್ರೆಗೆ ಬಂದಿರುವ ಮಾಹಿತಿ ಮೇರೆಗೆ ಆತನನ್ನು ಚಿಭಿದ್ರೆ ಬಸ್ ನಿಲ್ದಾಣದ ಹತ್ತಿರ ಬಂಧಿಸಲಾಗಿತ್ತು.

- Advertisement -

Related news

error: Content is protected !!