Monday, April 29, 2024
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ವಜ್ರ ಕಳ್ಳಸಾಗಣೆ; ಬರೋಬ್ಬರಿ 1.69 ಕೋಟಿ ರೂ. ಮೌಲ್ಯದ ವಜ್ರ ವಶ

- Advertisement -G L Acharya panikkar
- Advertisement -

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ ₹ 1.69 ಕೋಟಿ ಮೌಲ್ಯದ ಒಟ್ಟು 306.21 ಕ್ಯಾರೆಟ್ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ವಜ್ರದ ಹರಳುಗಳನ್ನು ವಿದೇಶಕ್ಕೆ ಸಾಗಿಸಲು ಯತ್ನಿಸಿದ್ದ ವ್ಯಕ್ತಿಯನ್ನು ಸಿಐಎಸ್​​ಎಫ್​ (CISF) ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ನಿವಾಸಿಯಾಗಿರುವ ವ್ಯಕ್ತಿ ದುಬೈಗೆ ತೆರಳಲು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದನು.

ಈ ವೇಳೆ ಪ್ರಯಾಣಿಕನ ಅನುಮನಾಸ್ಪದ ವರ್ತನೆ ಕಂಡು CISF ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸಿಐಎಸ್‌ಎಫ್ ಸಿಬ್ಬಂದಿ ತಪಾಸಣೆ ನಡೆಸುವಾಗ ಆತನ ಪ್ಯಾಂಟ್ ಒಳಗೆ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಎರಡು ಪೊಟ್ಟಣಗಳಲ್ಲಿ ಹರಳುಗಳಿದ್ದುದು ಕಂಡುಬಂದಿದೆ. ಆ ಎರಡು ಪೊಟ್ಟಣಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅದರೊಳಗೆ 13 ಸಣ್ಣ ಪೊಟ್ಟಣಗಳಲ್ಲಿ ವಜ್ರದ ಹರಳುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು. ಭದ್ರತಾ ಸಿಬ್ಬಂದಿ ಕಾಸರಗೋಡಿನ ಆ ಪ್ರಯಾಣಿಕನನ್ನು ವಶಕ್ಕೆ ಪಡೆದು, ಕಸ್ಟಮ್ಸ್ ಅಧಿಕಾರಿಗಳ ಸುಪರ್ದಿಗೆ ಒಪ್ಪಿಸಿದ್ದರು.

https://twitter.com/blrcustoms/status/1662488909329342465?s=20

ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ‌. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!