- Advertisement -
- Advertisement -





ಮಂಗಳೂರು : ಬೆಂಕಿ ತಗುಲಿ ಸುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾಂಡೇಶ್ವರ ಪೊಲೀಸ್ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ(57) ಚಿಕಿತ್ಸೆ ಫಲಕಾರಿಯಾಗದೆ ರವಿವಾರ(ಜ.11) ಮೃತಪಟ್ಟಿದ್ದಾರೆ. ಡಿಸೆಂಬರ್ 28 ರಂದು ಮಂಗಳೂರಿನ ಕೆಪಿಟಿ ಬಳಿಯ ವ್ಯಾಸನಗರದ ಮನೆಯಲ್ಲಿ ತರಗೆಲೆಯನ್ನು ಸುಡುವ ವೇಳೆ ಅವರಿಗೆ ಬೆಂಕಿ ತಗುಲಿತ್ತು. ಪರಿಣಾಮ ತೀವ್ರ ಗಾಯಗೊಂಡಿದ್ದ ಅವರು ಸುಮಾರು ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಸರಗೋಡು ಜಿಲ್ಲೆಯ ಕಾವುಗೊಳಿ ಮೂಲದವರಾದ ಹರೀಶ್ಚಂದ್ರ ಈ ಮೊದಲು ಬೈಕಂಪಾಡಿಯಲ್ಲಿ ನೆಲೆಸಿದ್ದರು. ಕೆಲವು ವರ್ಷಗಳ ಹಿಂದೆ ವ್ಯಾಸ ನಗರದಲ್ಲಿ ಮನೆ ಮಾಡಿ ವಾಸವಾಗಿದ್ದರು. 1993ರ ನವೆಂಬರ್ ನಲ್ಲಿ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು 33 ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
- Advertisement -








