Sunday, June 7, 2026
spot_imgspot_img
spot_imgspot_img

ಮಂಗಳೂರು: ಗಾಂಜಾ ಮಾರಟಕ್ಕೆ ಯತ್ನ: ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್ ಕುಂಟ ದೀಚು (22) ಎಂದು ಗುರುತಿಸಲಾಗಿದೆ.

ಆರೋಪಿಯಿಂದ 1 ಕೆ.ಜಿ. 150 ಗ್ರಾಂ ತೂಕದ ಸುಮಾರು 30 ಸಾವಿರ ರೂ. ಮೌಲ್ಯದ ಗಾಂಜಾ ಹಾಗೂ ಸ್ಕೂಟರ್ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕ ಅನಂತ ಪದ್ಮಾನಾಭ, ಪಿಎಸ್‌ಐ ಜ್ಯೋತಿ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!