Tuesday, December 3, 2024
spot_imgspot_img
spot_imgspot_img

ಮಂಗಳೂರು: ಪೊಲೀಸರ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ; ಚಡ್ಡಿ ಗ್ಯಾಂಗ್ ನ ಇಬ್ಬರು ಕಿಡಿಗೇಡಿಗಳ ಮೇಲೆ ಶೂಟೌಟ್..!

- Advertisement -
- Advertisement -

ಮಂಗಳೂರು: ನಗರದಲ್ಲಿ ದರೋಡೆ ಕೃತ್ಯದಲ್ಲಿ ಭಾಗಿಯಾದ ಚಡ್ಡಿಗ್ಯಾಂಗ್ ಮೇಲೆ ಪೊಲೀಸರಿಂದ ಶೂಟ್ ಔಟ್ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ನಗರದ ಹೊರವಲಯದ ಪಡುಪಣಂಬೂರು ಎಂಬಲ್ಲಿ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆಗೈದು ದರೋಡೆಕೋರರು ತಪ್ಪಿಸಿ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.

ದರೋಡೆ ಆರೋಪಿಗಳನ್ನು ನಿನ್ನೆ ಸಕಲೇಶಪುರದಿಂದ ಬಂಧಿಸಿ ತರಲಾಗಿತ್ತು. ಬುಧವಾರ ಬೆಳಗ್ಗೆ ಸ್ಥಳ ಮಹಜರು ವೇಳೆ ಎಎಸ್ ಐ ಸೇರಿ ಇಬ್ಬರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ದರೋಡೆಕೋರರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದೆ. ಗುಂಡು ಹಾರಿಸಿದ ಪರಿಣಾಮ ಇಬ್ಬರು ದರೋಡೆಕೋರ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡ ಪೊಲೀಸರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!