Friday, September 18, 2026
spot_imgspot_img
spot_imgspot_img

ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ಅಬ್ದುಲ್ ರಹಿಮಾನ್ ಕೊಳತ್ತಮಜಲು ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಎಸ್‌ಡಿಪಿಐ ಕಾರ್ಯಕರ್ತರು ಸಂಪುಟ ಸಚಿವರ ವಾಹನಕ್ಕೆ ಮುತ್ತಿಗೆ ಹಾಕಿ ಕರಿ ಪತಾಕೆ ಪ್ರದರ್ಶನ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ತಾಜ್ ವಿವಾಂತ ಹೋಟೆಲ್‌ನಿಂದ ಕದ್ರಿ ದೇವಸ್ಥಾನಕ್ಕೆ ತೆರಳುತ್ತಿದ್ದ ಮೂರು-ನಾಲ್ಕು ಸಚಿವರಿದ್ದ ವಾಹನವನ್ನು ಪುರಭವನದ ಎದುರು ಅಡ್ಡಗಟ್ಟಿದ ಕಾರ್ಯಕರ್ತರು, ಕರಿ ಪತಾಕೆ ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಪ್ರವೃತ್ತರಾಗಿ ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!