Sunday, April 28, 2024
spot_imgspot_img
spot_imgspot_img

ಮಂಗಳೂರು: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಓಮ್ನಿಗೆ ಬೈಕ್‌ ಡಿಕ್ಕಿ; ಯುವಕ ದಾರುಣ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು: ತಡರಾತ್ರಿ ರಸ್ತೆ ಗುಂಡಿ ತಪ್ಪಿಸಲು ಹೋದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ನಿಂತಿದ್ದ ಓಮ್ನಿ ವ್ಯಾನ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಬಿಕರ್ನಕಟ್ಟೆ ಬಳಿ ನಡೆದಿದೆ.

ಮೃತ ಯುವಕನನ್ನು ಅಂಕಿತ್( 20 )ಎನ್ನಲಾಗಿದೆ.

ಅಂಕಿತ್‌ ತನ್ನ ಸ್ನೇಹಿತನನ್ನು ಕುಲಶೇಖರ್‌ಗೆ ಬಿಟ್ಟು ಮನೆಗೆ ಹೋಗುತ್ತಿದ್ದ ವೇಳೆ ಬಿಕರ್ನಕಟ್ಟೆ ತಲುಪುತ್ತಿದ್ದಂತೆ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಯತ್ನಿಸಿದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ನಿಂತಿದ್ದ ಓಮ್ನಿ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ.

ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಅಂಕಿತ್ ಚರಂಡಿಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಆತನನ್ನು ಆಸ್ಪತ್ರೆಗೆ ಕರೆದೊಯ್ದರು ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಈ ಸಂಬಂಧ ಆತನ ಸ್ನೇಹಿತ ಜೋಷವಾ ನೀಡಿದ ದೂರಿನಂತೆ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!