



ಮಂಗಳೂರು: ಕ್ಯಾಬ್ ಚಾಲಕರೋರ್ವರಿಗೆ ಅವಾಚ್ಯವಾಗಿ ಟೆರರಿಸ್ಟ್ ಎಂದು ನಿಂದನೆ ಮಾಡಿದ ಆರೋಪ ಕೇಳಿ ಬಂದಿದ್ದು, ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ಅ.9ರಂದು ರಾತ್ರಿ ಕೇರಳ ಮೂಲದ ಸಂತೋಷ್ ಅಬ್ರಾಹಂ, ಜಯಕೃಷ್ಣನ್ ಮತ್ತು ವಿಮಲ್ ಎಂಬುವರುಗಳು Uber ಮತ್ತು Rapido Captain ಆಪ್ ಮೂಲಕ ಕ್ಯಾಬ್ ಬುಕ್ ಮಾಡಿ ಬಿಜೈ ನ್ಯೂ ರೊಡ್, ಮಂಗಳೂರು ಪಿಕ್ ಆಪ್ ಆಡ್ರೆಸ್ ನೀಡಿದ್ದು, ಇದನ್ನು ನೋಡಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ರವರು ಆಫ್ ಮೂಲಕ ಕಾಲ್ ಮಾಡಿ ಪಿಕ್ ಆಪ್ ಬಗ್ಗೆ ವಿಚಾರಿಸಿದಾಗ ಆಕಡೆಯಿಂದ ಹಿಂದಿ ಭಾಷೆಯಲ್ಲಿ ಮಾತನಾಡಿ ಕ್ಯಾಬ್ ಚಾಲಕ ಅಹ್ಮದ್ ಶಫೀಕ್‌ರವರಿಗೆ ಮುಸ್ಲಿಂ ತೀವ್ರವಾದಿ, ಟೆರರಿಸ್ಟ್, ಎಂದು ಅಪಹಾಸ್ಯವಾಗಿ ಮಾತನಾಡಿ, ಮುಸ್ಲಿಮ್ ಟೆರರಿಸ್ಟ್ ಎಂದು ಹಿಂದಿ ಭಾಷೆಯಲ್ಲಿ ಬೊಬ್ಬೆ ಹಾಕಿ, ಮಲಯಾಳಂ ಭಾಷೆಯಲ್ಲಿ ತಾಯಿಗೆ ಅವಾಚ್ಯವಾಗಿ ಬೈದಿರುತ್ತಾರೆ.
ಈ ಬಗ್ಗೆ ಕ್ಯಾಬ್ ಚಾಲಕ ಅಹ್ಮದ್ ಶಫೀಕ್ ರವರು ನೀಡಿದ ದೂರಿನಂತೆ ದಿನಾಂಕ: 10.10.2025 ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 103/2025 ಕಲಂ: 352, 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.








