


ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಹೇಳಿ ನಂಬಿಸಿ ಮಂಗಳೂರು ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ.
ಬಂಧಿತ ಆರೋಪಿಗಳನ್ನು ರಾಮಚಂದ್ರ ನಿವಾಸ, ಕೋಪರಕೈರಾನೆ, ನವಿ ಮುಂಬೈ,ಮಹಾರಾಷ್ಟ್ರ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಹಾಗೂ ಸಾಹುಕಾರಿ ಕಿಶೋರ್ ಕುಮಾರ್ @ ಅನಿಲ್ ಪಾಟೀಲ್ (34) ಎಸ್ಪಿಲಾ ಅಪಾರ್ಟಮೆಂಟ್, ಪಲಾವ್ ಸಿಟಿ, ದೊಂಬಿವೆಲ್, ಥಾಣೆ, ಮಹಾರಾಷ್ಟ್ರ ಎಂದು ಗುರುತಿಸಲಾಗಿದೆ.
ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಬೆಂದೂರ್ ವೆಲ್ ಎಂಬಲ್ಲಿ Hireglow Elegant Overseas International (Opc) Private Limited ಎಂಬ ಕಛೇರಿಯನ್ನು ತೆರೆದು, ಪತ್ರಿಕೆಯಲ್ಲಿ ಜಾಹೀರಾತನ್ನು ನೀಡಿ ಉದ್ಯೋಗಾಕಾಂಕ್ಷಿಗಳಿಗೆ ನಂಬಿಕೆ ಬರುವ ಹಾಗೇ ನಂಬಿಸಿ. ಅವರಿಂದ ಲಕ್ಷಾಂತರ ಹಣವನ್ನು ಪಡೆದುಕೊಂಡು ವೀಸಾ ನೀಡದೇ ಸುಮಾರು 289 ಜನರಿಗೆ ಸುಮಾರು 4. ಕೋಟಿ 50 ಲಕ್ಷ ರೂಪಾಯಿ ವಂಚನೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ಮೊ. ನಂ-75/2025 ಕಲಂ 316(2),318(4),r/w 3(5)) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಮಸೀವುಲ್ಲಾ ಖಾನ್ ಎಂಬ ಮುಂಬೈ ಮೂಲದ ಆರೋಪಿಯನ್ನು ಬಂಧಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ. ತನಿಖೆಯನ್ನು ಮುಂದುವರೆಸಿ ಪ್ರಕರಣದ ಪ್ರಮುಖ ಆರೋಪಿಗಳಾದ ದಿಲ್ ಶಾದ್ ಅಬ್ದುಲ್ ಸತ್ತಾರ್ ಖಾನ್ ಹಾಗೂ ಸಾಹುಕಾರಿ ಕಿಶೋರ್ ಕುಮಾರ್ @ ಅನಿಲ್ ಪಾಟೀಲ್ ಎಂಬವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣದ ಹೆಚ್ಚಿನ ತನಿಖೆಯ ಬಗ್ಗೆ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿರುತ್ತಾರೆ.ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.