ಸಾಂದರ್ಭಿಕ ಚಿತ್ರ



ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಲಾಗಿದೆ.
ಜುಲೈ 29 ಬುಧವಾರ(ಇಂದು) ಬೆಳಿಗ್ಗೆ 11.00 ಗಂಟೆಗೆ ಮುಲ್ಕಿಯ ಕೊಲ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ Ramky Energy and Environment Ltd ಸಂಸ್ಥೆಯಲ್ಲಿ ನ್ಯಾಯಾಲಯದ ಅನುಮತಿಯೊಂದಿಗೆ Drug Disposal Committee ಸಮಕ್ಷಮ ಮಾದಕ ವಸ್ತು ನಾಶ ಕಾರ್ಯಕ್ರಮ ನಡೆಯಿತು.
ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳ 59 NDPS ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಸುಟ್ಟು ನಾಶಪಡಿಸಲಾಯಿತು. 450 ಕೆ.ಜಿ ಗಾಂಜಾ, 43 ಕೆ.ಜಿ. 260 ಗ್ರಾಂ ಎಂ.ಡಿ.ಎಂ.ಎ, 880 ಗ್ರಾಂ ಹೈಡ್ರೋ ವೀಡ್ ಗಾಂಜಾ, 80 ಗ್ರಾಂ ಚರಸ್, 1 ಕೆ.ಜಿ. 200 ಗ್ರಾಂ ಭಾಂಗ್ಪ್ರ
ನಾಶಪಡಿಸಿದ ಮಾದಕ ವಸ್ತುಗಳಲ್ಲಿ 2024ರಲ್ಲಿ ಮಂಗಳೂರು ಪೂರ್ವ ಠಾಣೆ ಪ್ರಕರಣದ ₹75 ಕೋಟಿ ಮೌಲ್ಯದ 37 ಕೆ.ಜಿ ಎಂ.ಡಿ.ಎಂ.ಎ, 2025ರಲ್ಲಿ ಮುಲ್ಕಿ ಠಾಣೆ ಪ್ರಕರಣದ ₹4.47 ಕೋಟಿ ಮೌಲ್ಯದ 4 ಕೆ.ಜಿ ಎಂ.ಡಿ.ಎಂ.ಎ, ಕೊಣಾಜೆ ಠಾಣೆಯ ₹20 ಲಕ್ಷ ಮೌಲ್ಯದ 106 ಕೆ.ಜಿ ಗಾಂಜಾ ಮತ್ತು ಮೂಡಬಿದ್ರೆ ಠಾಣೆಯ ₹36 ಲಕ್ಷ ಮೌಲ್ಯದ 111 ಕೆ.ಜಿ ಗಾಂಜಾ ಸೇರಿವೆ.
2026ರಲ್ಲಿ ಇದುವರೆಗೆ 87 NDPS ಪ್ರಕರಣ ದಾಖಲಿಸಿ 157 ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ₹8,18,30,130 ಮೌಲ್ಯದ 148 ಕೆ.ಜಿ 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂ.ಡಿ.ಎಂ.ಎ, 1 ಕೆ.ಜಿ 705 ಗ್ರಾಂ ಹೈಡ್ರೋ ವೀಡ್ ಸೇರಿ ವಿವಿಧ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಸೇವನೆ ಸಂಬಂಧ 463 ಜನರ ವಿರುದ್ಧ 356 ಪ್ರಕರಣ ದಾಖಲಾಗಿದೆ.
ಮಾದಕ ವಸ್ತುಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಯ QR ಕೋಡ್ ಮೂಲಕ ಅಥವಾ ಪೊಲೀಸ್ ಕಂಟ್ರೋಲ್ ರೂಮ್ 112 / 9480802321 ಗೆ ತಕ್ಷಣ ಮಾಹಿತಿ ನೀಡುವಂತೆ ಮಂಗಳೂರು ನಗರ ಪೊಲೀಸರು ಮನವಿ ಮಾಡಿದ್ದಾರೆ








