Monday, April 29, 2024
spot_imgspot_img
spot_imgspot_img

ಮಂಗಳೂರು: ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆ..!!

- Advertisement -G L Acharya panikkar
- Advertisement -

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕೃಷ್ಣ (58) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ.

ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅವರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!