Wednesday, June 17, 2026
spot_imgspot_img
spot_imgspot_img

ಮಂಗಳೂರು: ದ.ಕ ಮುಂದುವರಿದ ವರುಣನ ಆರ್ಭಟ: ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸ್ಪೀಕರ್ ಸೂಚನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಈ ಬಗ್ಗೆ ಹಜ್ ಯಾತ್ರೆಯ ಪ್ರಯುಕ್ತ ಮದೀನಾ ದಲ್ಲಿರುವ ಸ್ಪೀಕರ್ ಯು.ಟಿ.ಖಾದರ್ ಅವರು ಮಾಹಿತಿ ಪಡೆದು, ಸೂಕ್ತ ಮುಂಜಾಗ್ರತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವ್ಯಾಪಕ ಮಳೆಯ ಕಾರಣ ಉಳ್ಳಾಲ ತಾಲೂಕಿನ ಬೆಳ್ಳ ಮತ್ತು ಮಂಜನಾಡಿ ಗ್ರಾಮಗಳಲ್ಲಿ ಗುಡ್ಡ ಕುಸಿದು ಪ್ರಾಣ ಹಾನಿ ಸಂಭವಿಸಿದೆ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯ ಉಳ್ಳಾಲ ಬೈಲು, ಅಕ್ಕರೆಕೆರೆ, ಮಿಲ್ಲತ್ ನಗರ, ಉಳಿಯ, ಅಲೇಕಳ, ಸುಂದರಿಬಾಗ್, ಕಲ್ಲಾಪು, ಸೋಮೇಶ್ವರ, ಕೋಟೆಕಾರ್ ವ್ಯಾಪ್ತಿಯ ಕುಂಪಲ, ಕನೀರ್ ತೋಟ, ಉಚ್ಚಿಲ ಮುಂತಾದ ತಗ್ಗು ಪ್ರದೇಶಗಳಿಗೆ ಕೃತಕ ನೆರೆಯಿಂದ ಮನೆಗಳಿಗೆ ನೀರು ನುಗ್ಗಿ ಆಸ್ತಿ ಪಾಸ್ತಿಗಳಿಗೆ ನಷ್ಟ ಉಂಟಾಗಿದ್ದು, ಮುಂಜಾಗ್ರತಾ ಕ್ರಮ ಹಾಗೂ ಅಗತ್ಯ ರಕ್ಷಣಾ ಕಾರ್ಯದ ಕುರಿತಾಗಿ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಎನ್.ಡಿ.ಆರ್.ಎಫ್. ಮುಂತಾದ ರಕ್ಷಣಾ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಯು.ಟಿ. ಖಾದ‌ರ್ ತಿಳಿಸಿದ್ದಾರೆ.

- Advertisement -

Related news

error: Content is protected !!