



ಮಂಗಳೂರು: ಸಾರ್ವಜನಿಕೆರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಹಾಗೂ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿ 11 ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ನಗರ ಅತ್ತಾವರ ಕಾಪ್ರಿಗುಡ್ಡೆ ಮಸೀದಿ ಬಳಿ ನಡೆದಿದೆ.
ಬಂಧಿತ ಆರೋಪಿಗಳನ್ನು ಅದ್ವೈತ್ ಶ್ರೀಕಾಂತ್, ಮುಹಮ್ಮದ್ ಅಪ್ಸಿನ್, ಮುಹಮ್ಮದ್ ಸ್ವಾನೀದ್, ನಿಬಿನ್ ಟಿ ಕುರಿಯನ್, ಮುಹಮ್ಮದ್ ಕೆ.ಕೆ, ಮುಹಮ್ಮದ್ ಹನಾನ್, ಮುಹಮ್ಮದ್ ಶಾಮಿಲ್, ಅರುಣ್ ತೋಮಸ್, ಮುಹಮ್ಮದ್ ನಿಹಾಲ್ ಸಿ, ಮೊಹಮ್ಮದ್ ಜಾಸೀಲ್ ವಿ, ಸಿದಾನ್ ಪಿ ಎಂದು ಗುರುತಿಸಲಾಗಿದೆ.
ಸೆ.26ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಹೆಚ್.ಸಿ 465 ಪುಟ್ಟರಾಮ್ ಸಿ ಹೆಚ್ ಮತ್ತು ಪಿ.ಸಿ 2367 ಮಲ್ಲಿಕ್ ಜಾನ್ ರವರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕೇರಳ ಮೂಲದ ಅದೈತ್ ಶ್ರೀಕಾಂತ್, ಮುಹಮ್ಮದ್ ಅಫ್ಘನ್ ಮೊಹಮ್ಮದ್ ಸ್ನಾನಿದ್ ಹಾಗೂ ಇತರರು ಎಲ್ಲಿಂದಲೋ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ವಾಣಿಜ್ಯ ಪ್ರಮಾಣದಲ್ಲಿ ಖರೀದಿಸಿಕೊಂಡು ಬಂದು ಸಾರ್ವಜನಿಕರಿಗೆ ಮಾರಾಟ ಮಾಡುವ ಸಲುವಾಗಿ ಮಂಗಳೂರು ನಗರ ಅತ್ತಾವರ ಕಾಪ್ರಿಗುಡ್ಡೆ ಮಸೀದಿ ಬಳಿಯಿರುವ ಕಿಂಗ್ಸ್ ಕೋರ್ಟ್ ಅಪಾರ್ಟಮೆಂಟಿನ ಪ್ಲಾಟ್ ನಂಬ್ರ G1ರಲ್ಲಿ ತಮ್ಮ ವಶದಲ್ಲಿಟ್ಟುಕೊಂಡಿರುತ್ತಾರೆ ಎಂಬ ಖಚಿತ ಮಾಹಿತಿ ಮೆರೆಗೆ ಎನ್.ಡಿ.ಪಿ.ಎಸ್. ಕಾಯ್ದೆಯಂತೆ ಕ್ರಮ ಕೈಗೊಳ್ಳುವಂತೆ ನೀಡಿದ . : 206/2025, ໖໐: 8)C2 ,(2 (b) (ii) C … 1985 ರೀತ್ಯಾ ಪ್ರಕರಣ ದಾಖಲಾಗಿರುತ್ತದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶೀತಲ್ ಅಲಗೂರು ರವರು ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಅತ್ತಾವರ ಕಾಫಿಗುಡ್ಡೆ ಕಿಂಗ್ಸ್ ಕೋರ್ಟ್ ಅಪಾರ್ಟಮೆಂಟ್‌ನ ಪ್ಲಾಟ್ ನಂಬರ್ G1 ನೇಯದ್ದಕ್ಕೆ ದಾಳಿ ನಡೆಸಿ 11 ಮಂದಿ ಆರೋಪಿಗಳೆಲ್ಲರೂ ಮಂಗಳೂರಿನ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಬಿ.ಎ. ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರುತ್ತಾರೆ.
ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಮಾರಾಟ ಮಾಡುವ ಸಲುವಾಗಿ ಓರಿಸ್ಸಾ ಮೂಲಕ ಖರೀದಿಸಿ ತಂದಿದ್ದ ಸುಮಾರು 12 ಕೆ.ಜಿ 264 ಗ್ರಾಮ್ ತೂಕದ ನಿಷೇದಿತ ಮಾದಕ ವಸ್ತು ಗಾಂಜಾ (ಅಂದಾಜು ಮೌಲ್ಯ 2,45,280/-) ಇರುವ 7 ಪ್ಯಾಕೇಟ್ ಗಳನ್ನು, 2 ಡಿಜಿಟಲ್ ತೂಕ ಮಾಪನಗಳು (ಅಂದಾಜು ಮೌಲ್ಯ 2,000/-) ಮತ್ತು ಆರೋಪಿಗಳ ವಶದಿಂದ ಒಟ್ಟು 11 ಮೊಬೈಲ್ ಫೋನ್ (ಅಂದಾಜು ಮೌಲ್ಯ 1,05,000/-) ಗಳನ್ನು ಸೇರಿ ಒಟ್ಟು 3,52,280/- ರೂಪಾಯಿ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಗ್ ಥೋರಟ್, ಇವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ನಿರೀಕ್ಷಕ ಗುರುರಾಜ್ ಹಾಗೂ ಪೊಲೀಸ್ ಉಪ ನಿರೀಕ್ಷಕ ಶೀತಲ್ ಅಲಗೂರು ಮತ್ತು ಪೊಲೀಸ್ ಉಪ ನಿರೀಕ್ಷಕ ಮಾರುತಿ ಪಿ ರವರು ಆರೋಪಿಗಳನ್ನು ಪತ್ತೆ ಮಾಡಿ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ. ಆರೋಪಿಗಳ ಹಾಗೂ ಸೊತ್ತು ಪತ್ತೆಗೆ ದಕ್ಷಿಣ ಪೊಲೀಸ್ ಠಾಣಾ ಸಿಬ್ಬಂದಿಗಳು ಸಹಕರಿಸಿರುತ್ತಾರೆ.








