- Advertisement -
- Advertisement -




ಮಂಗಳೂರು: ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಬಜಪೆ ಪೊಲೀಸರು ಬಂದಿಸಿದ್ದಾರೆ.
ಜ.3 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಸುನಿಲ್ ಕುಮಾರ್ (40) ಬ್ರಿಜೇಶ್ ಶ್ರೀವತ್ಸ(42), ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿತರಿಂದ ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರಿದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುತ್ತಾರೆ.
- Advertisement -








