Wednesday, April 23, 2025
spot_imgspot_img
spot_imgspot_img

ಮಂಗಳೂರು: 75 ಕೋ.ರೂ. ಮೌಲ್ಯದ ಡ್ರಗ್ಸ್ ವಶ ಪ್ರಕರಣ; ಬಂಧಿತರಿಬ್ಬರು 7 ದಿನ ಪೊಲೀಸ್ ಕಸ್ಟಡಿಗೆ..!

- Advertisement -
- Advertisement -

ಮಂಗಳೂರು: ಬೆಂಗಳೂರಿನಲ್ಲಿ 75 ಕೋಟಿ ರೂ. ಮಾಲ್ಯದ ಎಂಡಿಎಂಎ ಡ್ರಗ್ಸ್ ಸಹಿತವಾಗಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿರುವ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಜೆಗಳನ್ನು ನಗರದ ನ್ಯಾಯಾಲಯವು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ದಕ್ಷಿಣ ಆಫ್ರಿಕಾದ ಪ್ರಜೆಗಳಾದ ಬಂಬಾ ಫಾಂಟಾ ಆಲಿಯಾಸ್ ಅಡೊನಿಸ್ ಜಬುಲೈಲ್ (31) ಮತ್ತು ಒಲಿಜೊ ಇವನ್ಸ್ ಆಲಿಯಾಸ್ ಅಬಿಗೈಲ್ ಅಡೊನಿಸ್ (30) ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪೊಲೀಸರು ಈ ಇಬ್ಬರು ಆರೋಪಿಗಳನ್ನು ಮಾ.14ರಂದು ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿನಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆರೋಪಿಗಳಿಬ್ಬರನ್ನು ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಸಲ್ಲಿಸಿಸದ್ದರು. ಮನವಿ ಪುರಸ್ಕರಿಸಿದ ಕೋರ್ಟ್ ಸೋಮವಾರ ಆರೋಪಿಗಳನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಮಾರ್ಚ್ 14ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದ್ದ ದಕ್ಷಿಣ ಆಫ್ರಿಕಾದ ಈ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಅವರ ಬಳಿಯಿದ್ದ ಎರಡು ಟ್ರಾಲಿ ಬ್ಯಾಗ್ ಗಳಲ್ಲಿ ಸಾಗಾಟ ಮಾಡಿದ್ದ 75 ಕೋಟಿ ರೂ ಮೌಲ್ಯದ 37.585 ಕೆಜಿ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್ ಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದರು.

- Advertisement -

Related news

error: Content is protected !!