Thursday, June 18, 2026
spot_imgspot_img
spot_imgspot_img

ಮಂಗಳೂರು: ಪೆಟ್ರೋ ಕೆಮಿಕಲ್ ಕಂಪನಿಯಲ್ಲಿ ಬೆಂಕಿ; ಓರ್ವ ಮೃತ್ಯು, 6 ಜನರಿಗೆ ಗಾಯ..!

- Advertisement -
- Advertisement -

ಮಂಗಳೂರು: ಕಾರ್ಖಾನೆಯೊಂದರಲ್ಲಿ ನಡೆದ ಬೆಂಕಿ ಅನಾಹುತಕ್ಕೆ ಕೆಲಸ ನಿರತ ಕಾರ್ಮಿಕನೋರ್ವ ಸಾವನ್ನಪ್ಪಿ, ಇತರ ಆರು ಮಂದಿ ಗಾಯಗೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ನಡೆದಿದೆ.

ಇಲ್ಲಿನ ಜೋನ್ಸ್ ಪೆಟ್ರೋ ಕೆಮಿಕಲ್ ಪ್ರೈವೇಟ್ ಲಿ. ಕಂಪನಿಯಲ್ಲಿ ಶನಿವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಕಾರ್ಮಿಕ ರೊನಾಲ್ಡ್ ಪೌಲ್ ಮೃತ ದುರ್ದೈವಿಯಾಗಿದ್ದಾರೆ. ರೊನಾಲ್ಡ್ ಪೌಲ್ ಮತ್ತು ಇತರ ಆರು ಮಂದಿ ಖಾಲಿ ತೈಲ ಟ್ಯಾಂಕ್‌ನ ದುರಸ್ಥಿ ಕಾರ್ಯ ಮಾಡುತ್ತಿದ್ದರು. ಮೇಲ್ಭಾಗದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಸ್ಥಳದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ರೊನಾಲ್ಡ್ ಅವರಿಗೆ ಬೆಂಕಿ ತಗುಲಿದೆ. ರೊನಾಲ್ಡ್ ಅವರು ತೊಟ್ಟಿಯ ಮೇಲಿನಿಂದ ಸುಮಾರು 20 ಅಡಿ ಕೆಳಕ್ಕೆ ಬಿದ್ದು, ಅವರ ತಲೆ ಮತ್ತು ಹೊಟ್ಟೆಗೆ ಗಾಯಗಳಾಗಿದ್ದುವು.

ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಇತರ ಆರು ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಂಪನಿಯ ಮಾಲೀಕರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!