- Advertisement -
- Advertisement -




ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಯುವಕರಿಂದ 1.82 ಕೋಟಿ ಹಣವನ್ನು ಪಡೆದು ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯನ್ನು ಮುಂಬಯಿ ನಿವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36) ಎಂದು ಗುರುತಿಸಲಾಗಿದೆ.
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 1,65,000 ರೂಪಾಯಿ ಹಣವನ್ನು ಪಡೆದು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂಪಾಯಿ ಹಣವನ್ನು ಪಡೆದು ನಂಬಿಕೆ ದ್ರೋಹ ಎಸಗಿರುವುದಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಯ ವಿರುದ್ಧ ಈಗಾಗಲೇ ಅನಧಿಕೃತ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಬಿ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
- Advertisement -







