Saturday, July 25, 2026
spot_imgspot_img
spot_imgspot_img

ಮಂಗಳೂರು : ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಕಾರಿನಲ್ಲಿ ಗಾಂಜಾ ತುಂಬಿಸಿಕೊಂಡು‌ ಮಾರಾಟ ಮಾಡಲು ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಮುಡಿಪು ಬಳಿ ಬಂಧಿಸಿದ್ದು,‌ ಅಪಾರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ನೌಶಾದ್ ಮತ್ತು ಇಬ್ರಾಹಿಂ ಎಂದು‌ ಗುರುತಿಸಲಾಗಿದೆ.

ಆರೋಪಿಗಳು ಮೇಲ್ಕಾರ್-ಸಜೀಪ-ಬೋಳಿಯಾರು ಮಾರ್ಗವಾಗಿ ಗಾಂಜಾದ ಕಟ್ಟುಗಳನ್ನು ತೆಗೆದುಕೊಂಡು ಮುಡಿಪು ಮತ್ತು ಕೇರಳ ರಾಜ್ಯಕ್ಕೆ ಮಾರಾಟ ಮಾಡಲು ತರುತ್ತಿದ್ದಾರೆಂದು ಎಂಬ ಮಾಹಿತಿ ತಿಳಿದ ಹಿನ್ನೆಲೆ ಕೊಣಾಜೆ ಪೊಲೀಸರು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆದ ಪೊಲೀಸರು ಅವರ ಬಳಿ ಇದ್ದ ಸುಮಾರು 80 ಕೆಜಿ ಗಾಂಜಾ ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು, 3 ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!