


ಮಂಗಳೂರು: ಕಬ್ಬಿಣದ ರಾಡ್ ಎದೆಯೊಳಗೆ ಹೊಕ್ಕು ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ರಕ್ಷಿಸುವಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಯಶಸ್ವಿಯಾಗಿದೆ. ಬಾಲಕಿ ಆಟವಾಡುತ್ತಿದ್ದಾಗ ಕಬ್ಬಿಣದ ರಾಡ್ ಮೇಲೆ ಆಕಸ್ಮಿಕವಾಗಿ ಬಿದ್ದಿದ್ದು, ರಾಡ್ ಬಾಲಕಿಯ ಎದೆಯ ಬಲಭಾಗದಲ್ಲಿ ಮುಂದೆ ಹೊಕ್ಕು ಹಿಂಭಾಗದಿಂದ ಹೊರಬಂದಿತ್ತು.
ಮನೆಮಂದಿ ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು ಎಂದು ವರದಿ ಮೂಲಕ ತಿಳಿದು ಬಂದಿದೆ.
ತುರ್ತು ಚಿಕಿತ್ಸಾ ತಜ್ಞ ಡಾ. ಅರ್ಪಿತಾ ಮತ್ತವರ ತಂಡ ತಕ್ಷಣ ಬಾಲಕಿಯನ್ನು ಶಸ್ತ್ರಚಿಕಿತ್ಸೆ ಕೊಠಡಿಗೆ ಕಳುಹಿಸಿ, ಥೊರಾಕೊಟೊಮಿ ಎಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನ ನಡೆಸಿದ್ದಾರೆ. ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞ ಡಾ ಸದಾಶಿವ್ ರಾವ್, ಅರವಳಿಕೆ ತಜ್ಞ ಡಾ. ಸುನೀಲ್ ಮತ್ತು ಡಾ. ಫ್ರೀಡಾ ಕುಟಿನ್ಹಾ ತಂಡ ಬಾಲಕಿಯ ಎದೆಗೆ ಹೊಕ್ಕಿದ್ದ ಕಬ್ಬಿಣದ ರಾಡ್‌ನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇದೀಗ ಬಾಲಕಿ ಚೇತರಿಸಿಕೊಂಡಿದ್ದಾಳೆ.








