Tuesday, June 9, 2026
spot_imgspot_img
spot_imgspot_img

ಮಂಗಳೂರು: ಗಾಂಜಾ ನಶೆಯಲ್ಲಿ ಕಲ್ಲು, ಚೂರಿ ಹಿಡಿದು ಯುವಕನ ದಾಂಧಲೆ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

- Advertisement -
- Advertisement -
vtv vitla

ಮಂಗಳೂರು : ಮಾದಕ ವಸ್ತು ಸೇವಿಸಿ ನಶೆಯಲ್ಲಿ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ.

ಬಂಧಿತನನ್ನು ಉಳ್ಳಾಲ ಮುಕ್ಕಚ್ಚೇರಿ, ಕೈಕೋ ರೋಡ್ ನಿವಾಸಿ ಅಬ್ಬೂಬಕ್ಕರ್ ಸಿದ್ಧೀಕ್ ಎಂದು ಗುರುತಿಸಲಾಗಿದೆ. ಈತ ನಾಟೆಕಲ್ ಜಂಕ್ಷನ್ ನಲ್ಲಿ ನಶೆಯಲ್ಲಿ ರಸ್ತೆ ಮಧ್ಯದ ಡಿವೈಡರ್ ನಲ್ಲಿ ಕಲ್ಲು ಮತ್ತು ಚೂರಿ ಹಿಡಿದು ಧಾಂದಲೆ ನಡೆಸುತ್ತಿದ್ದ. ಈ ವೇಳೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಮತ್ತು ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮೀಯ ರೀತಿಯಲ್ಲಿ ಸಿದ್ಧೀಕ್‌ನನ್ನು ಲಾಕ್ ಮಾಡಿ ಪೊಲೀಸ್ ವಾಹನಕ್ಕೆ ತಳ್ಳಿದ್ದಾರೆ.

ಕೊಣಾಜೆ ಠಾಣೆಯ ಪೊಲೀಸ್ ಸಿಬ್ಬಂದಿ ಮಾಜಿ ಯೋಧ ಸಂತೋಷ್ ಎಂಬವರು ಚಾಣಾಕ್ಷತನದಿಂದ ಸಿದ್ಧೀಕ್‌ನನ್ನು ಲಾಕ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯನ್ನು ಯಾರೋ ಮೊಬೈಲಲ್ಲಿ ರೆಕಾರ್ಡ್ ಮಾಡಿದ್ದು ವೀಡಿಯೋ ತುಣುಕು ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆರೋಪಿ ಅಬ್ಬೂಬಕ್ಕರ್ ಸಿದ್ಧೀಕ್ ನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಅಮಲು ಪದಾರ್ಥ ಸೇವಿಸಿದ್ದು ಧೃಢಪಟ್ಟ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!