Thursday, July 10, 2025
spot_imgspot_img
spot_imgspot_img

ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕದ್ರಿ ಟ್ರಾಫಿಕ್ ಪೊಲೀಸ್..!

- Advertisement -
- Advertisement -

ಮಂಗಳೂರು: ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ. 5000/- ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸದ್ಯ ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಎಕ್ಸಿಡೆಂಟ್ ಆಗಿದ್ದು, ಈ ಕುರಿತು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ತಿಳಿಸಿದಂತೆ ದೂರುದಾರರು ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ನೀಡಿರುತ್ತಾರೆ.

ಈ ಬಗ್ಗೆ ದೂರುದಾರರು ತನ್ನ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಡಲು ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರು ರೂ 50,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ನಂತರ ದೂರುದಾರರು ತನ್ನ ವಕೀಲರಲ್ಲಿ ವಿಷಯವನ್ನು ತಿಳಿಸಿ ವಕೀಲರು ಠಾಣೆಗೆ ಭೇಟಿ ನೀಡಿ ಕಾರನ್ನು ಬಿಟ್ಟುಕೊಡುವಂತೆ ಕೇಳಿಕೊಂಡಾಗ ದೂರುದಾರರು ಕಾರನ್ನು ಸ್ವೀಕರಿಸಿರುತ್ತಾರೆ ಎಂದು ಸಹಿ ಪಡೆದುಕೊಂಡು ಕಾರನ್ನು ಪೊಲೀಸ್ ಠಾಣೆಯಿಂದ ಬಿಟ್ಟುಕೊಟ್ಟಿರುವುದಿಲ್ಲ. ನಂತರ ತಸ್ಲಿಂ ರವರು ಕಾರನ್ನು ಬಿಟ್ಟುಕೊಡಲು ದೂರುದಾರರ ಮೊಬೈಲ್ ಅನ್ನು ಬಲವಂತದಿಂದ ಪಡೆದುಕೊಂಡು ಕಾರನ್ನು ಬಿಟ್ಟು ಕಳುಹಿಸಿರುತ್ತಾರೆ.

ನಂತರ ದೂರುದಾರರು ತನ್ನ ಮೊಬೈಲ್ ಪೋನ್ ಅನ್ನು ತನಗೆ ವಾಪಾಸ್ಸು ಕೊಡಲು ತಸ್ಲಿಂ ರವರಲ್ಲಿ ಕೇಳಿಕೊಂಡಾಗ ರೂ 50,000/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮೊಬೈಲ್ ಪೋನ್ ಅನ್ನು ಹಿಂತಿರುಗಿಸಬೇಕಾದರೆ ಓರಿಜಿನಲ್ ಲೈಸನ್ಸ್ ಅನ್ನು ಠಾಣೆಗೆ ತಂದುಕೊಡುವಂತೆ ತಿಳಿಸಿರುತ್ತಾರೆ. ನಂತರ ದೂರುದಾರರು ಓರಿಜಿನಲ್ ಲೈಸನ್ಸ್ ಅನ್ನು ನೀಡಿರುತ್ತಾರೆ.

ತಸ್ಲಿಂ ರವರು ಠಾಣೆಯ ಮತ್ತೋರ್ವ ಸಿಬ್ಬಂದಿ ವಿನೋದ್ ರವರ ಮುಖಾಂತರ ರೂ 30,000/- ಲಂಚದ ಹಣ ಕೊಟ್ಟು ಓರಿಜಿನಲ್ ಲೈಸನ್ಸ್ ಪಡೆದುಕೊಂಡು ಹೋಗಲು ತಿಳಿಸಿದ್ದು, ದೂರುದಾರರು ಜುಲೈ 9 2025 ರಂದು ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಗೆ ಹೋಗಿ ತಸ್ಲಿಂ ರವರನ್ನು ಭೇಟಿ ಮಾಡಿ ಮಾತನಾಡಿದಾಗ ಓರಿಜಿನಲ್ ಲೈಸನ್ಸ್ ನೀಡಲು ತಸ್ಲಿಂ ರವರು ರೂ 10,000/- ಹಣವನ್ನು ನೀಡುವಂತೆ ತಿಳಿಸಿರುತ್ತಾರೆ.

ಈ ಬಗ್ಗೆ ದೂರುದಾರರು ತನ್ನಲ್ಲಿ ರೂ 500 ಇದೆ ಎಂದಾಗ ರೂ 5000 ಇಲ್ಲದೇ ಠಾಣೆ ಕಡೆಗೆ ಬರಬೇಡ ಎಂದು ಬೈದು ಕಳುಹಿಸಿರುತ್ತಾರೆ. ಓರಿಜಿನಲ್ ಲೈಸನ್ಸ್ ನೀಡಲು ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ದೂರುದಾರರಿಗೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಇಚ್ಛೆ ಇಲ್ಲದ ಕಾರಣ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕದ್ರಿ ಟ್ರಾಪಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ತಸ್ಲಿಂ ರವರ ಮತ್ತು ವಿನೋದ್ರವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಈ ಕಾರ್ಯಾಚರಣೆಯಲ್ಲಿ ಶ್ರೀ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ರವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

- Advertisement -

Related news

error: Content is protected !!