- Advertisement -
- Advertisement -




ಮಂಗಳೂರು: ಈಜುಕೊಳದಲ್ಲಿ ಮುಳುಗಿ ಕೋಚ್, ಲೈಫ್‌ಗಾರ್ಡ್ ಸಾವನ್ನಪ್ಪಿದ ಘಟನೆ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೆ. ಚಂದ್ರಶೇಖರ್ ರೈ ಅವರು 2023 ರಲ್ಲಿ ಈಜುಕೊಳದ ನೀರಿನೊಳಗೆ ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್‌ಸಾಲ್ಟ್ ಎಂಬ ಸ್ಟಂಟ್ ಮಾಡಿ ‘ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ಸ್ಥಾನಗಳಿಸಿದ್ದರು. ಈ ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -








