Sunday, June 29, 2025
spot_imgspot_img
spot_imgspot_img

ದ.ಕ: ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

- Advertisement -
- Advertisement -

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು, ಮಕ್ಕಳು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದಾರೆ.

ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕದಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶಿಸಿದ್ದಾರೆ.

- Advertisement -

Related news

error: Content is protected !!