Saturday, June 6, 2026
spot_imgspot_img
spot_imgspot_img

ಮಂಗಳೂರು: ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

- Advertisement -
- Advertisement -

ಮಂಗಳೂರು: ಹೊರಲವಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ.

ಡಿ ವೈ ಎಸ್ ಪಿ ಡಾ. ಗಾನ ಪಿ ಕುಮಾರ್ ನೇತೃತ್ವದ ತಂಡವು ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅಮುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ ಸರಬರಾಜಿನಲ್ಲಿ ಅವ್ಯವಹಾರ, ಮೃಗಾಲಯದ ನಿರ್ವಹಣೆಯಲ್ಲಿ ಭಾರೀ ಲೋಪದೋಷಗಳ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ಈ ಹಿಂದೆ ಮೇ 23ರಂದು ಸಹ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ದಿಡೀರ್ ಭೇಟಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!