Friday, July 11, 2025
spot_imgspot_img
spot_imgspot_img

ಮಂಗಳೂರು: ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯ ಬಂಧನ..!

- Advertisement -
- Advertisement -

ಮಂಗಳೂರು: ಮಹಾರಾಷ್ಟ್ರ, ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುವನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಪ್ರಜ್ವಲ್ ಪಿನ್ಯಾಸ ಪ್ರಜ್ವಲ್ ಪೀಣ್ಯಾಸ್‌ ಎಂದು ಗುರುತಿಸಲಾಗಿದ್ದು, ಈತ ಬೀದರ್‌ನ ಮಂಗಲಪೇಟೆಯವನಾಗಿದ್ದು, ಪ್ರಸ್ತುತ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ವಾಸಿಸುತ್ತಿದ್ದಾನೆ.

ಜುಲೈ 2 ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 31/2025 ಕಲಂ. 8(c), 20(b)(ii)(B) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ವರದಿಯಾಗಿರುತ್ತದೆ.

ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಮಾಡುವವರಿಂದ ತನಿಖೆ ಆರಂಭಿಸಿ ಹಂತ ಹಂತವಾಗಿ ಮಾದಕ ವಸ್ತುಗಳನ್ನು ಮಂಗಳೂರು ನಗರದಲ್ಲಿ ಪೂರೈಕೆ ಮಾಡುವ 9 ಜನರನ್ನು ಪತ್ತೆ ಮಾಡಿ ಈಗಾಗಲೇ ದಸ್ತಗಿರಿ ಕ್ರಮ ಕೈಗೊಂಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.

ಪ್ರಕರಣ ತನಿಖೆಯ ವೇಳೆ ಮಹಾರಾಷ್ಟ್ರ, ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುವನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿತನನ್ನು ಪತ್ತೆ ಮಾಡಿ ದಸ್ತಗಿರಿ ಕ್ರಮ ಕೈಗೊಂಡು ಜುಲೈ 10 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿ ಕೃತ್ಯಕ್ಕೆ ಬಳಸಿದ 1ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿ ಈ ಹಿಂದೆ ಮಂಗಳೂರು ನಗರ ಪಾಧರ್ ಮುಲ್ಲರ್‌‌ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಆರೋಪಿಯ ವಿರುದ್ಧ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 3 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತವೆ.

- Advertisement -

Related news

error: Content is protected !!