Wednesday, July 22, 2026
spot_imgspot_img
spot_imgspot_img

ಮಂಗಳೂರು: ಸೈಬರ್ ವಂಚನೆಗೆ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250ಕ್ಕೂ ಹೆಚ್ಚು ಸಿಮ್‌ ಬಳಕೆ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು: ಕಸ್ಟಮ್ಸ್ ಹೆಸರಿನಲ್ಲಿ ವ್ಯಕ್ತಿಯೋರ್ವರಿಗೆ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿ ವವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ತ್ರಿಪುರಾ ರಾಜ್ಯದ ದಮೆನ್‌ಜೋಯ್ ರಿಯಾಂಗ್ (27), ಮಣಿಪುರ ರಾಜ್ಯ ಕಾಂಗ್ಪೋಕ್ಪಿ ಜಿಲ್ಲೆಯ Hmngte Real kom @ Mangte amosh (33) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 45/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು ಕಲಂ.420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿಯಾಗಿ ದೂರು ನೀಡಿದಂತೆ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿರುತ್ತದೆ.

ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ Damenjoy Reang ಎಂಬಾತನನ್ನು ನ.13ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ Hmngte Reail kom @ Mangte amosh ಎಂಬಾತನನ್ನುನ.15ರಂದು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ನ.16ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ತನಿಖೆಯ ವೇಳೆ ಆರೋಪಿತನಾದ Hmngte Reail kom @ Mangte amosh ಎಂಬಾತನು 300 ಕ್ಕೂ ಹೆಚ್ಚೂ ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಸೈಬರ್ ವಂಚನೆಗ ಬಳಕೆ ಮಾಡಿರುವುದು ಕಂಡುಬಂದಿರುತ್ತದೆ. ಸದ್ರಿ ಆರೋಪಿತನಿಂದ 08-ಮೊಬೈಲ್ ಫೋನ್ ಗಳು, 20- ವಿವಿಧ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಗಳು,18- ವಿವಿಧ ಬ್ಯಾಂಕ್ ಗಳ ಪಾಸ್ ಬುಕ್ ಗಳು,11- ವಿವಿಧ ಬ್ಯಾಂಕ್ ಗಳ ಚೆಕ್ ಬುಕ್ ಹಾಗೂ 7- ಸಿಮ್ ಕಾರ್ಡ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿರವರು ಭಾಗವಹಿಸಿರುತ್ತಾರೆ.

- Advertisement -

Related news

error: Content is protected !!