Tuesday, June 9, 2026
spot_imgspot_img
spot_imgspot_img

ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಬ್ರಿಜೇಶ್ ಚೌಟರವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜ್ಞಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇರ್ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರನ್ನು ಆಯ್ಕೆಮಾಡಲಾಗಿದೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ಕ್ಯಾ. ಬ್ರಿಜೇಶ್‌ ಚೌಟ ಕೂಡಾ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯೂ ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಸೂಕ್ತ ಮಾರ್ಗದರ್ಶನ ಕೊಡಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ “ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ” ಎಂದು ಹೇಳಿದ್ದಾರೆ.

- Advertisement -

Related news

error: Content is protected !!