Thursday, June 18, 2026
spot_imgspot_img
spot_imgspot_img

ಮಂಗಳೂರು: ಅಕ್ರಮ ಮದ್ಯ ತಯಾರಿಕೆ ಘಟಕಕ್ಕೆ ಪೊಲೀಸ್‌ ದಾಳಿ; ಇಬ್ಬರ ಬಂಧನ

- Advertisement -
- Advertisement -

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ರವಿವಾರ ನಡೆದಿದೆ.

ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ.

ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಮನೆಯೊಂದರಲ್ಲಿ ಥೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ದಾಳಿ ಸಂದರ್ಭ ಥೋಮಸ್ ಮತ್ತು ಮಣಿಕುಟ್ಟನ್ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ ಸುಮಾರು 1,15,110-00 ಮೌಲ್ಯದ ಅಕ್ರಮ ಮದ್ಯ ತಯಾರಿಕೆಯ ಮೂರು ಮೆಷಿನ್‌ಗಳು, ಮಿಕ್ಸರ್ ಮೆಷಿನ್, ಅಕ್ರಮ ಮದ್ಯದ ಬಾಟ್ಲಿಗಳು, ಗೋವದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ ಮದ್ಯದ ಬಾಟ್ಲಿಗಳು , ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!