- Advertisement -
- Advertisement -







ಮಂಗಳೂರು: ನಿಂತಿದ್ದ ಕಾಲೇಜು ಬಸ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಬಲ್ಮಠದಲ್ಲಿ ನಡೆದಿದೆ.
ಬಲ್ಮಠದ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನ ಬಸ್‌ನ್ನು ರಸ್ತೆ ಬದಿ ನಿಲ್ಲಿಸಲಾಗಿದ್ದು, ಅದಕ್ಕೆ ವಿದ್ಯಾರ್ಥಿಗಳು ಹತ್ತುತ್ತಿದ್ದರು. ಈ ವೇಳೆ ಸ್ಟೇಟ್ ಬ್ಯಾಂಕ್ ಕಡೆಯಿಂದ ಕೊಣಾಜೆಗೆ ತೆರಳುತ್ತಿದ್ದ ಖಾಸಗಿ ಬಸ್ ನೇರವಾಗಿ ಬಂದು ಹಿಂದಿನಿಂದ ಕಾಲೇಜು ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಗಕ್ಕೆ ಕಾಲೇಜು ಬಸ್ ಮುಂದಕ್ಕೆ ಹೋಗಿದ್ದು, ಹಿಂಭಾಗದಲ್ಲಿ ಕುಳಿತಿದ್ದ ಐದಾರು ವಿದ್ಯಾರ್ಥಿಗಳಿಗೆ ಮತ್ತು ಖಾಸಗಿ ಬಸ್‌ನ ಮುಂಭಾಗದಲ್ಲಿದ್ದ ಕೆಲವು ಪ್ರಯಾಣಿಕರಿಗೆ ಗಾಯವಾಗಿರುವ ಕುರಿತು ವರದಿಯಾಗಿದೆ.
ಪೊಲೀಸರ ಪ್ರಕಾರ ಹತ್ತು ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
- Advertisement -








