Saturday, June 20, 2026
spot_imgspot_img
spot_imgspot_img

ಮಂಗಳೂರು: ಹೆಸರಾಂತ ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ನಿಧನ..!

- Advertisement -
- Advertisement -

ಮಂಗಳೂರು: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದ ಕಲಾವಿದರಾಗಿದ್ದರು.

ಇಂದು ಮಧ್ಯಾಹ್ನ 1 ಗಂಟೆಗೆ ಕದ್ರಿ ಮಲ್ಲಿಕಟ್ಟೆ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಿದ್ದು, ಮಧ್ಯಾಹ್ನ 1.15 ಕ್ಕೆ ಕದ್ರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಜರುಗಲಿದೆ ಎನ್ನಲಾಗಿದೆ. ಹೃದಯ ಸಂಬಂಧಿ ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Related news

error: Content is protected !!