


ಮಂಗಳೂರು: ವಿಶ್ವಹಿಂದೂ ಪರಿಷದ್ ಹಾಗೂ ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ, ದ.ಕ. ಜಿಲ್ಲೆ ಹಾಗೂ ಇತರ ಸಂಘಟನೆಗಳ ಒಕ್ಕೂಟದೊಂದಿಗೆ ಜಾಗೃತಿ ಸಭೆ ಸೆಪ್ಟೆಂಬರ್ 9ರಂದು ನಡೆಯಲಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಯಿತು.
ಕಾನೂನಿನ ನೆಪದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳಿಗೆ ತಡೆಯೊಡ್ಡುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ ಬೃಹತ್ ಜನಾಗ್ರಹ ಸಭೆ 2025 ಸೆಪ್ಟೆಂಬರ್ 9ರಂದು ಬೆಳಗ್ಗೆ 10 ಗಂಟೆಗೆ ಗೋರಕ್ಷನಾಥ ಮಂದಿರ, ಕದ್ರಿ ಪಾರ್ಕ್ ಬಳಿ, ಮಂಗಳೂರು ಇಲ್ಲಿ ನಡೆಯಲಿದ್ದು, ತುಳುನಾಡಿನ ಸಂಸ್ಕೃತಿ ಪರಂಪರೆ ಉಳಿಸುವ ಜೊತೆಗೆ ಈ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ತೊಡಗಿಸಿಕೊಂಡಿರುವ ಸಾವಿರಾರು ಕುಟುಂಬಗಳಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಬೃಹತ್ ಜನಾಗ್ರಹ ಸಭೆಯನ್ನು ಏರ್ಪಡಿಸಲಾಗಿದ್ದು ತುಳುನಾಡಿನ ಜನರು ಅತ್ಯಧಿಕ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ.
ಯಕ್ಷ ದ್ರುವ ಫೌಂಡೇಶನ್ ಅಧ್ಯಕ್ಷ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ, ಚಲನಚಿತ್ರ ನಟ, ನಾಟಕ ರಂಗಭೂಮಿ ಕಲಾವಿದ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಡಾ. ದೇವದಾಸ್ ಕಾಪಿಕಾಡ್, ಲಕುಮಿ ತಂಡದ ಅಧ್ಯಕ್ಷ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಲಯನ್ ಕಿಶೋರ್ ಡಿ ಶೆಟ್ಟಿ, ಜಾನಪದ ಪರಿಷದ್ ದಕ ಜಿಲ್ಲೆ ಅಧ್ಯಕ್ಷ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ವಿ.ಹಿ.ಪ ಪ್ರಾಂತ ಸಹಕಾರ್ಯದರ್ಶಿ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಶರಣ್ ಪಂಪುವೆಲ್, ವಿ.ಹಿ.ಪ ಜಿಲ್ಲಾಧ್ಯಕ್ಷ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಎಚ್.ಕೆ ಪುರುಷೋತ್ತಮ, ವಿ.ಹಿ.ಪ ವಿಭಾಗ ಸಹಕಾರ್ಯದರ್ಶಿ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಶಿವಾನಂದ್ ಮೆಂಡನ್, ದಕ ಜಿಲ್ಲಾ ಸೌಂಡ್ಸ್ ಅಂಡ್ ಲೈಟ್ಸ್ ಅಧ್ಯಕ್ಷ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಧನರಾಜ್ ಶೆಟ್ಟಿ, ನಾಟಕ ಸಂಗೀತ ನಿರ್ದೇಶಕರ ಒಕ್ಕೂಟದ ಅಧ್ಯಕ್ಷ ಮತ್ತು ತುಳುನಾಡ ಧಾರ್ಮಿಕ ಸಾಂಸ್ಕೃತಿಕ ವೈಭವ ಸಂರಕ್ಷಣಾ ಸಮಿತಿ ಸಂಚಾಲಕ ಮಧು ಬಂಗೇರ ಕಲ್ಲಡ್ಕ, ನಾಟಕ ಸಂಗೀತ ನಿರ್ದೇಶಕರ ಒಕ್ಕೂಟ ಕಾರ್ಯದರ್ಶಿ ಕೃಷ್ಣ ಮಂಜೇಶ್ವರ, ಫ್ಲವರ್ ಡೆಕೋರೇಷನ್ ಅಧ್ಯಕ್ಷ ತುಷಾರ್ ಸುರೇಶ್, ಚಲನಚಿತ್ರ ನಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಜಾನಪದ ಪರಿಷತ್ತು ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.








