Thursday, June 18, 2026
spot_imgspot_img
spot_imgspot_img

ಮಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಮಹಿಳೆಯ ಗಂಡ ಹಾಗೂ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ಬಂಧನ..!

- Advertisement -
- Advertisement -

ಮಂಗಳೂರು: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆ ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಮಹಿಳೆಯ ಗಂಡನನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಿನಾಂಕ: 15-07-2025 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ಥ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದು, ತನ್ನ ಗಂಡನು ಹಣಕ್ಕಾಗಿ ಒತ್ತಾಯ ಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುತ್ತಾನೆ.

ಸಂತ್ರಸ್ಥ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್‌‌ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್‌ನು ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ. ನಂತರ ಸಂತ್ರಸ್ಥೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್‌ನು ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ. ಸಂತ್ರಸ್ಥೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್‌‌ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!