Thursday, September 10, 2026
spot_imgspot_img
spot_imgspot_img

ಮಂಗಳೂರು: ಐದು ಗ್ರಾಮ ಪಂಚಾಯತ್‌ಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ – ದಾಖಲೆಗಳ ಪರಿಶೀಲನೆ

- Advertisement -
- Advertisement -

ಮಂಗಳೂರು :ಐದು ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಸೆ.10 ರಂದು ಬೆಳಗ್ಗೆ 10:30 ರ ವೇಳೆಗೆ ತಲಪಾಡಿ, ಕೊಣಾಜೆ, ಬೆಳ್ಳಾರೆ, ಪಂಜ ಮತ್ತು ಬೆಳುವಾಯಿ ಗ್ರಾಮ ಪಂಚಾಯತ್ ಕಚೇರಿಗಳಿಗೆ ಉಡುಪಿ, ಕಾರವಾರ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ಭೇಟಿ ನೀಡಿದೆ.

ಕಚೇರಿಯಲ್ಲಿರುವ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಲೋಕಾಯುಕ್ತ ಕೇಂದ್ರ ಕಚೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!