- Advertisement -
- Advertisement -






ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮು ಸಂಘರ್ಷ ನಿಗ್ರಹಕ್ಕಾಗಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಎ.ಸಲೀಂ, ಅಪರ ಪೊಲೀಸ್ ಮಹಾ ನಿರ್ದೇಶಕ ಎಸ್.ಮುರುಗನ್, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್, ವಿಶೇಷ ಕಾರ್ಯಪಡೆ ಘಟಕದ ಡಿಐಜಿಪಿ ಆಗಿರುವ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.
- Advertisement -








