Wednesday, June 17, 2026
spot_imgspot_img
spot_imgspot_img

ಮಂಗಳೂರು: ಟರ್ಮಿನಲ್ ಬಿಲ್ಡಿಂಗ್ ಧ್ವಂಸಗೊಳಿಸುವುದಾಗಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ; ಆರೋಪಿ ಅರೆಸ್ಟ್‌‌

- Advertisement -
- Advertisement -

ಮಂಗಳೂರು: ಟರ್ಮಿನಲ್ ಬಿಲ್ಡಿಂಗ್ ಧ್ವಂಸಗೊಳಿಸುವುದಾಗಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಎಂದು ಗುರುತಿಸಲಾಗಿದೆ.

29ರಂದು ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುತ್ತಾನೆ. ಈ ಬಗ್ಗೆ ಡ್ಯೂಟಿ ಟರ್ಮಿನಲ್ ಮ್ಯಾನೇಜರ್, ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ರವರು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದಲ್ಲಿ ಮೊ.ನಂ 156/2025 ಕಲಂ:- 351(2), 351(3) BNS U/s:- 3(1)d Suppression of unlawful acts against safety of civil aviation act 1982 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಬೆದರಿಕೆ ಕರೆ ಮಾಡಿದ ಆರೋಪಿ ತಮಿಳುನಾಡು ರಾಜ್ಯ ವೆಲ್ಲೂರು ಜಿಲ್ಲೆಯ ನಿವಾಸಿ Sasikumar (38) S/o:-M D Sampath ಎಂಬಾತನನ್ನು ತಮಿಳುನಾಡು ರಾಜ್ಯ ವೆಲ್ಲೂರ್ ನಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಆರೋಪಿಯು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್‌ನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್‌ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ದಸ್ತಗಿರಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುತ್ತಾನೆ.

- Advertisement -

Related news

error: Content is protected !!