- Advertisement -
- Advertisement -


ಮಂಗಳೂರು: ಪ್ರವಾಸಿಯೊಬ್ಬರು ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟವರನ್ನು ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಎಂದು ಗುರುತಿಸಲಾಗಿದೆ.
ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿದ್ದಾರೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
- Advertisement -