Friday, June 27, 2025
spot_imgspot_img
spot_imgspot_img

ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚಿಸಿದ ಮಹಿಳೆ; ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಪುಂಜಾಲಕಟ್ಟೆ: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ.

ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್​​ಲೈನ್​ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್​ ಅವರಿಗೆ ನಂಬಿಸಿದ್ದಾಳೆ.

ಆಗ, ರಾಜೇಶ್​ ಅವರು ಬಂಟ್ವಾಳ‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್​ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್​ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್​ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್​ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.

ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್​ ಅವರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಸಂಧ್ಯಾ ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಬಳಿಕ ರಾಜೇಶ್​ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಬಿಎನ್​ಎಸ್​ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!