Thursday, May 2, 2024
spot_imgspot_img
spot_imgspot_img

ಮಂಗಳೂರು: ಸ್ಕೂಟರ್‌ನಿಂದ ಬಿದ್ದು ಮಹಿಳೆ ಮೃತ್ಯು..!

- Advertisement -G L Acharya panikkar
- Advertisement -

ಮಂಗಳೂರು: ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ (52) ಮೃತಪಟ್ಟವರು.

ಮೂಲತ: ಬಂಟ್ವಾಳ ನೆಟ್ಲದವರಾಗಿದ್ದ ಇವರು ಸೆ.24ರ ಭಾನುವಾರ ಕುಟುಂಬದ ಮನೆಯಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡು ಸಂಜೆ ಕಾಸರಗೋಡು ಕಡೆ ತೆರಳಲು ಸಹೋದರನ ಬೈಕ್ ನಲ್ಲಿ ತೊಕ್ಕೊಟ್ಟು ಜಂಕ್ಷನ್ ಗೆ ತೆರಳುತ್ತಿದ್ದರು.

ಈ ನಡುವೆ ಜಪ್ಪಿನಮೊಗರು ಬಳಿಯ ಸಂಬಂಧಿಕರ ಮನೆಗೆ ತೆರಳಿ ಬಳಿಕ ಬೀರಿಗೆಗೆ ಬಂದು ಅಲ್ಲಿಂದ ಕಾಸರಗೋಡು ಕಡೆ ತೆರಳಲು ಹೆದ್ದಾರಿಯಲ್ಲಿ ತೊಕ್ಕೊಟ್ಟು ಪ್ರೈಓವರ್‌ ಬಳಿ ತಲುಪುತ್ತಿದ್ದಂತೆ ಕೆರೆಬೈಲು ನಾಗನಕಟ್ಟೆ ಬಳಿ ಸ್ಕೂಟರ್ ನಿಂದ ಕೆಳಗೆ ಉರುಳಿ ಬಿದ್ದಿದ್ದಾರೆ. ಈ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದ ಸುಮಾ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!