- Advertisement -
- Advertisement -





ಮಂಗಳೂರು: ಕೃಷ್ಣಾಷ್ಟಮಿ ಆಚರಣೆಯ ಅಂಗವಾಗಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ತಡರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಜನೆ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮೃತರನ್ನು ತೋಕೂರು ನಿವಾಸಿ ಶ್ರೀನಾಥ್ ಶೆಟ್ಟಿಗಾರ್(38) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶ್ರೀನಾಥ್, ಅಷ್ಟಮಿ ಆಚರಣೆಯ ಹಿನ್ನೆಲೆಯಲ್ಲಿ ತಮ್ಮ ಊರಿಗೆ ಮರಳಿದ್ದರು. ಅಷ್ಟಮಿ ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದರು. ಊರಿನ ಸಾರ್ವಜನಿಕ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








