Monday, June 8, 2026
spot_imgspot_img
spot_imgspot_img

ಮಂಗಳೂರು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು..!!

- Advertisement -
- Advertisement -

ಮಂಗಳೂರು: ಅವಿವಾಹಿತ ಯುವಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ. ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿಪ್ರಸಾದ್ ಆಚಾರ್ಯ (36) ಮೃತ ದುರ್ದೈವಿ.

ವೆಲ್ಡಿಂಗ್‌ ಕೆಲಸ ಮಾಡುತ್ತಿದ್ದ ಹರಿಪ್ರಸಾದ್‌ ಅವರು ಅವಿವಾಹಿತರಾಗಿದ್ದು, ವಿಪರೀತ ಕುಡಿತ ಚಟ ಹೊಂದಿದ್ದರಂತೆ. ಕಳೆದ ನಾಲ್ಕು ದಿವಸಗಳಿಂದ ಮನೆಗೂ ಹೋಗಿರಲಿಲ್ಲ ಎನ್ನಲಾಗಿದೆ. ಹರಿಪ್ರಸಾದ್ ಸ್ನೇಹಿತರ ಜತೆ ಸಮೀಪದ ಖಾಸಗಿ ಲೇ ಔಟ್ ನಲ್ಲಿರುವ ಕೆರೆಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಆಕಸ್ಮತ್‌ ಆಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!