




ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ₹2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾವನ್ನು ಮುಲ್ಕಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಉಳ್ಳಾಲ ತಾಲೂಕಿನ ಕೋಟೆಕಾರ್ ಗ್ರಾಮದ ಹಿದಾಯತ್ ನಗರ ಮುಳ್ಳುಗುಡ್ಡೆ ನಿವಾಸಿ ಅಬ್ಬಾಸ್ (50) ಎಂದು ಗುರುತಿಸಲಾಗಿದೆ.
ಜೂನ್ 25ರಂದು ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಯನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ 4 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 45/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಹಾಗೂ 20(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಮೇಲೆ ಈ ಕೆಳಗಿನಂತೆ ಪ್ರಕರಣಗಳು ದಾಖಲಾಗಿರುತ್ತದೆ
- ಉಳ್ಳಾಲ ಠಾಣಾ ಅಕ್ರ ನಂ: 216/2021 ಕಲಂ 341,504,324,307,506 r/w 34 IPC
- ಉಳ್ಳಾಲ ಠಾಣಾ ಅಕ್ರ ನಂ: 100/2026 ಕಲಂ 8(c),20(b) NDPS Act








