Saturday, June 13, 2026
spot_imgspot_img
spot_imgspot_img

ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಘಟಕಕ್ಕೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮುಖ್ಯಸ್ಥ

- Advertisement -
- Advertisement -

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರವು ರಚಿಸಿದ್ದ ವಿಶೇಷ ಕಾರ್ಯಪಡೆ ಘಟಕಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀ‌ರ್ ಕುಮಾ‌ರ್ ರೆಡ್ಡಿಯನ್ನು ಮುಖ್ಯಸ್ಥರನ್ನಾಗಿ ನೇಮಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.ಈ ಕಾರ್ಯಪಡೆಯಲ್ಲಿ ಒಟ್ಟು 248 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಇವು ಮೂರು ಕಂಪೆನಿಗಳಾಗಿ ಕಾರ್ಯ ನಿರ್ವಹಿಸಲಿವೆ. ಸದ್ಯಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ಈ ವಿಶೇಷ ಕಾರ್ಯಪಡೆಯ ಹೊಣೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. ಜೂ.13ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಕಾರ್ಯಪಡೆಯನ್ನು ಉದ್ಘಾಟಿಸಲಿದ್ದಾರೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.ಈ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವುದಕ್ಕೆ ವಿಶೇಷ ಕಾರ್ಯಪಡೆ ಸಜ್ಜಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಈ ಕಾರ್ಯಪಡೆಯ ಕೇಂದ್ರ ಕಚೇರಿ ಮಂಗಳೂರಿನಲ್ಲೇ ಇರಲಿದೆ.ಕಾರ್ಯಪಡೆಯಲ್ಲಿ ತಲಾ 80 ಸಿಬ್ಬಂದಿಯನ್ನು ಒಳಗೊಂಡ ಮೂರು ಕಂಪೆನಿಗಳು ಇರಲಿವೆ ಎಂದಿದ್ದಾರೆ.

- Advertisement -

Related news

error: Content is protected !!