Friday, June 5, 2026
spot_imgspot_img
spot_imgspot_img

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ- ಹೊತ್ತಿ ಉರಿದ ಕಾರು!

- Advertisement -
- Advertisement -

ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರು ಸಂಪೂರ್ಣ ಹೊತ್ತಿ ಉರಿದ ಘಟನೆ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ನಡೆದಿದೆ.

ಕಾರು ಉರಿಯುವುದನ್ನು ಕಂಡ ಚಾಲಕ ಬದಿಗೆ ನಿಲ್ಲಿಸಿ ತಕ್ಷಣ ಕಾರಿನಿಂದ ಹೊರ ಬಂದಿದ್ದಾರೆ. ತಮ್ಮ ಸಮಯ ಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ.

ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿಯಲಾರಂಭಿಸಿದೆ. ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಾಯದೊಡನೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!