Sunday, April 28, 2024
spot_imgspot_img
spot_imgspot_img

ಮಂಗಳೂರು: ದುಬೈನಿಂದ ₹34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ಸಾಗಾಟ; ಇಬ್ಬರು ವಶಕ್ಕೆ!

- Advertisement -G L Acharya panikkar
- Advertisement -

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಸುಮಾರು ₹34 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಬ್ಬರು ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿಟ್ಟಿದ್ದು, ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ‌ ಕಾರ್ಯಾಚರಣೆಯನ್ನು ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ ಕಂಡಿ, ಅಧಿಕಾರಿಗಳಾದ‌ ನಾಗೇಶ್ ಕುಮಾರ್, ಮನೋಕಾತ್ಯಾಯಿನಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!