Thursday, June 4, 2026
spot_imgspot_img
spot_imgspot_img

ವೆನ್‌ಲಾಕ್ ಆಸ್ಪತ್ರೆಗೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ – ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭ- ಸಚಿವ ದಿನೇಶ್ ಗುಂಡೂರಾವ್

- Advertisement -
- Advertisement -

ಮಂಗಳೂರು: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಬೇಕೆಂಬ ನೆಲೆಯಲ್ಲಿ ವೆನ್ಹಾಕ್ ಸರಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ ಒಪಿಡಿ ಕಟ್ಟಡ ನಿರ್ಮಾಣಕ್ಕೆ ಸದ್ಯದಲ್ಲಿಯೇ ಟೆಂಡ‌ರ್ ಆಹ್ವಾನಿಸಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು ಸಿಸಿ ಟಿವಿ ಅಳವಡಿಸಲಾಗುವುದು ಎಂದು ಮಾಹಿತಿ ನೀಡಿದರು.

ವೆನ್ಹಾಕ್ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

- Advertisement -

Related news

error: Content is protected !!