Monday, October 19, 2026
spot_imgspot_img
spot_imgspot_img

ದ.ಕ ಜಿಲ್ಲೆಗೆ ಆಗಮಿಸುವ ಕೇರಳದ ಎಲ್ಲಾ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ- ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ

- Advertisement -
- Advertisement -

ಮಂಗಳೂರು: ಈಗಾಗಲೇ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವ ಕೇರಳದ ಎಲ್ಲಾ ವಿಧ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ರವರು ಹೇಳಿದ್ದಾರೆ.

ಜಿಲ್ಲೆಯಲ್ಲಿನ ಮೆಡಿಕಲ್, ನರ್ಸಿಂಗ್ ಹಾಗೂ ಇನ್ನಿತರ ಶಿಕ್ಷಣ ಸಂಸ್ಥೆಗಳಲ್ಲಿ ಕೇರಳದ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಂಡು ಬರುತ್ತಿರುವ ಹಿನ್ನೆಲೆ ಈ ನಿರ್ಧಾರ ಕೈಗೆತ್ತಿಕೊಳ್ಳಲಾಗಿದೆ.

ಎಲ್ಲಾ ಕಾಲೇಜುಗಳ ಕೇರಳದ ವಿದ್ಯಾರ್ಥಿಗಳನ್ನು ಗುರುತಿಸಿ, ಕೋವಿಡ್ ತಪಾಸಣೆಗೊಳಪಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ರವರು ತಿಳಿಸಿದ್ದಾರೆ.

- Advertisement -

Related news

error: Content is protected !!