- Advertisement -
- Advertisement -

ಮಾಣಿ: ಅತೀ ವೇಗವಾಗಿ ಬಂದ ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ.
ಕಲ್ಲಡ್ಕ ಬಳಿಯ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.
- Advertisement -