- Advertisement -
- Advertisement -
ಬಂಟ್ವಾಳ: ಆಟೋ ರಿಕ್ಷಾ ಚಾಲಕರೊಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಾರ್ಗ ಮಧ್ಯೆ ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಾಣಿ ಸಮೀಪದಲ್ಲಿ ಘಟನೆ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಮೃತಪಟ್ಟ ಆಟೋ ಚಾಲಕ.

ಜಯಕರ ಪೂಜಾರಿ ಅವರು ಎಂದಿನಂತೆ ಕೆಲ ಮಕ್ಕಳನ್ನು ಶಾಲೆಗೆ ಬಿಡುತ್ತಿದ್ದರು. ಮಕ್ಕಳನ್ನು ಆಟೋರಿಕ್ಷಾದಲ್ಲಿ ಶಾಲೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಮಕ್ಕಳು ಜೆರಾಕ್ಸ್ ಶಾಪ್ ಹತ್ತಿರ ಆಟೋ ನಿಲ್ಲಿಸಲು ಸೂಚಿಸಿದ್ದಾರೆ. ಈ ವೇಳೆ ಆಟೋರಿಕ್ಷಾ ನಿಲ್ಲಿಸಿದ್ದು, ಮಕ್ಕಳು ಜೆರಾಕ್ಸ್ ತೆಗೆದು ಹಿಂದಿರುಗಿದ ವೇಳೆ ಅವರು ಕುಸಿದು ಬಿದ್ದಿದ್ದರು ಎನ್ನಲಾಗಿದೆ.
ತಕ್ಷಣ ಅವರನ್ನು ಹತ್ತಿರದ ಕ್ಲಿನಿಕ್ ಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

- ಸ್ವಾತಂತ್ರ್ಯೋತ್ಸವ ಅಂಗವಾಗಿ ಆ.7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗ ಯಾತ್ರೆ
- ಕುಂದಾಪುರ: ದಿನಸಿ ಅಂಗಡಿಯಲ್ಲಿ ಅಗ್ನಿ ಅವಘಡ; 40 ಲಕ್ಷ ರೂ.ಗೂ ಅಧಿಕ ನಷ್ಟ
- ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ವಿರುದ್ಧ RTO ವಿಶೇಷ ಕಾರ್ಯಾಚರಣೆ – ಡಜನ್ಗಟ್ಟಲೆ ವಾಹನ ಸೀಜ್
- ಸರ್ಕಾರಿ ಶಾಲೆ ಶಿಕ್ಷಕರಿಗೆ ಟಿಇಟಿ ಅರ್ಹತೆ ಕಡ್ಡಾಯ- ಕೇಂದ್ರ ಸರ್ಕಾರ
- ಉಡುಪಿ: ಕಟಪಾಡಿ ಬಳಿ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ವಿಭಜಕಕ್ಕೆ ಡಿಕ್ಕಿ


- Advertisement -








